ಕೋಲಾರ ಶಾಸಕ ಶ್ರೀನಿವಾಸ ಗೌಡ, ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್​ನಿಂದ ಉಚ್ಛಾಟನೆ…

59
firstsuddi

ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಇಬ್ಬರನ್ನೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಿನ್ನೆ ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೆಡಿಎಸ್ ಕೋರ್ ಕಮೀಟಿ ಸಭೆಯಲ್ಲಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು.

ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ ಅವರು ಈ ಕುರಿತು ಮಾತನಾಡಿ, ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಎರಡು ಮೂರು ದಿನದೊಳಗೆ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದರು.