ಕೋವಿಡ್ -19 ಪರಿಹಾರಕ್ಕಾಗಿ ವಿರುಷ್ಕಾ ದಂಪತಿಯಿಂದ ನಿಧಿ ಸಂಗ್ರಹ ಅಭಿಯಾನ ಆರಂಭ…

144
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಪ್ರತಿದಿನ ಸೊಂಕಿಗೆ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಅಭಿಯಾನವೊಂದನ್ನು ಶುರು ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ.

ಕೊರೊನಾದಿಂದಾಗಿ ಭಾರತ ಸಂಕಷ್ಟದಲ್ಲಿದೆ. ಇಂತಹ ಕಷ್ಟದ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಬೇಕು. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ನಾವು ಕಾಪಾಡೋಣ. ಕೊರೊನಾ ಪರಿಹಾರ ನಿಧಿಯನ್ನು ಸಂಗ್ರಹಿಸುತ್ತಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ಎದುರಿಸೋಣ ಎಂದಿದ್ದಾರೆ.