ಕೋವಿಡ್ ನಿಂದ ಮರಣಹೊಂದಿದ ಶಿಕ್ಷಕರಿಗೆ ಪರಿಹಾರ ಕೊಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹ…

196
firstsuddi

ಬೆಂಗಳೂರು :  ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡುವಂತೆ ಟ್ವಿಟ್ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಶಿಕ್ಷಕರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಅವರ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಕೂಡಲೇ ಈ ಕುರಿತು ತುರ್ತುಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.