ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ…

151
firstsuddi

ಕಲಬುರಗಿ : ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ 25 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಆಂಬ್ಯುಲೆನ್ಸ್ ಚಾಲಕ ಪಿಂಟು ಎಂಬಾತ ಸೋಂಕಿತೆ ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರ ಯತ್ನಕ್ಕೆ ಮುಂದಾಗಿದ್ದಾನೆ. ಈ ವೇಳೆ ತಕ್ಷಣ ಎಚ್ಚರಗೊಂಡ ಮಹಿಳೆ ಚೀರಾಡಿದ್ದಾಳೆ. ಆಗ ಅಕ್ಕ-ಪಕ್ಕದಲ್ಲಿದ್ದ ರೋಗಿಗಳು ಕೂಡಲೇ ಎಚ್ಚರಗೊಂಡಿದ್ದರಿಂದ ಆರೋಪಿ ಓಡಿಹೋಗಿದ್ದಾನೆ.

ಖಾಸಗಿ ಅಂಬುಲೆನ್ಸ್ ಚಾಲಕ್ ಪಿಂಟು ಈ ಕೃತ್ಯ ಎಸಗಿರುವುದಾಗಿ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಆರೋಪಿ ಪಿಂಟುನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಸಂಬಂಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.