ಬೆಂಗಳೂರು : ನಗರದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿದೆ.
ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರು, ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಪಿಂಗ್ ಮಾಲ್ ಗಳು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಮತ್ತು ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದಂತೆ ಬಿಬಿಎಂಪಿ ಮಾರ್ಷಲ್ ಗಳು ಜನರಿಗೆ ಎಚ್ಚರಿಕೆ ನೀಡಲಿದ್ದಾರೆ. ಆದರೆ ಪ್ರಸ್ತುತ ಪಾಲಿಕೆಯು ಸರ್ಕಾರದ ಆದೇಶಕ್ಕೆ ಬದ್ಧವಾಗಿದೆ ಮತ್ತು ಯಾವುದೇ ದಂಡವನ್ನು ವಿಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 291 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಲಿಯಾಗಿದ್ದಾರೆ.










