ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ಪರಿಹಾರ : ಸರ್ಕಾರದಿಂದ ಆದೇಶ ಬದಲಾವಣೆ…

63
firstsuddi

ಬೆಂಗಳೂರು : ಕೊವಿಡ್-19ನಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಮಹತ್ವದ ಬದಲಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ನೀಡಿದೆ.

ಈ ಹಿಂದೆ ಕುಟುಂಬದ ದುಡಿಯುವ ಸದಸ್ಯರಾಗಿದ್ದರೇ ಮಾತ್ರ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಇದೀಗ ಹಿಂದಿನ ಆದೇಶ ಬದಲಾಯಿಸಿ ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರೊನಾದಿಂದ ಮೃತರಾಗಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ಪರಿಹಾರ ಕೊಡುವುದಾಗಿ ಹೊಸ ಆದೇಶ ಪ್ರಕಟ ಮಾಡಿದೆ.

ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೊವಿಡ್- 19 ವೈರಾಣು ಸೋಂಕಿನಿಂದ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ಕುಟುಂಬದ ಅರ್ಹ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. 1 ಲಕ್ಷ ಪರಿಹಾರದ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.