ಕ್ಯಾಂಟರ್ ಪಲ್ಟಿ- ಮೂವರು ದುರ್ಮರಣ, ಮೂವರಿಗೆ ಗಾಯ…

59
firstsuddi

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು, ಇನ್ನೂ ಮೂವರಿಗೆ ಗಾಯಗಳಾಗಿರುವ ಘಟನೆ ನಿನ್ನೆ ಮಧ್ಯಾಹ್ನ ಸಂಭವಿಸಿದೆ.

ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ನವೀನ್ ಕುಂಬಾರ್(23), ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ(22) ಎಂದು ಗುರುತಿಸಲಾಗಿದೆ. ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ತಿಳಿದುಬಂದಿದೆ. ಇನ್ನೂ ಘಟನೆಯ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.