ಕ್ಯಾಂಟರ್​ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ – ಇಬ್ಬರು ದುರ್ಮರಣ…

66
firstsuddi

ಬೆಂಗಳೂರು : ಚಲಿಸುತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ತಡರಾತ್ರಿ 12 ಗಂಟೆ ಸುಮಾರಿಗೆ ಲಗ್ಗೆರೆ ಕಡೆಯಿಂದ ಗೊರಗುಂಟೆ ಪಾಳ್ಯದ ಕಡೆಗೆ ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಅಸ್ಸೋಂ ಮೂಲದ ಕುಮಾರ್ ಲಿಂಬೂ ಮತ್ತು ಸುನಿಲ್ ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದಿದೆ.

ಸ್ಕೂಟರ್ ಡಿಕ್ಕಿ ಹೊಡೆದ ರಭಸಕ್ಕೆ ಕುಮಾರ್ ಲಿಂಬು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.