ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿ ಸಾವು…

260
firstsuddi

ಕಲಬುರಗಿ : ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಕಲಬುರಗಿಯ ಜೀಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕಲಬುರಗಿಯ ಇಂದಿರಾನಗರ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೃತ ವ್ಯಕ್ತಿ ಕಳೆದ 14 ದಿನಗಳಿಂದ ನಗರದ ಬಿಸಿಎಂ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಆಗಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದ ಹಿನ್ನೆಲೆ, ತಮ್ಮ ಸಂಬಂಧಿಕರೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಚಂದ್ರಕಾಂತ್  ಅನಾರೋಗ್ಯದಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಕಾಂತ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.