ಬಂಟ್ವಾಳ : ಖಾಸಗಿ ಬಸ್‍ವೊಂದು ಪಲ್ಟಿಯಾಗಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸು ಇದಾಗಿದ್ದು, ತುಂಬೆ ಕಾಲೇಜು ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.










