ತುಮಕೂರು : ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದೆ.
ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಬಸ್ ನಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.










