ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು…

43
firstsuddi

ಬೆಂಗಳೂರು: ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗರಬಾವಿ ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಮುರಳಿ (40) ಮೃತ ಬೈಕ್ ಸವಾರ. ಮುರಳಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಬಸ್ ಮುರಳಿ ತಲೆಯ ಮೇಲೆ ಹರಿದಿದೆ. ಇದರಿಂದ ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುರಳಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.