ಖಾಸಗಿ ಬಸ್ ಹಾಗೂ ಟಾಟ ಏಸ್ ನಡುವೆ ಮುಖಾಮುಖಿ ಡಿಕ್ಕಿ, 11 ಮಂದಿ ಸಾವು…

297
firstsuddi

ಚಿಕ್ಕಬಳ್ಳಾಪುರ : ಖಾಸಗಿ ಬಸ್ ಹಾಗೂ ಟಾಟ ಏಸ್ ನಡುವೆ ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಬಳಿ ನಡೆದಿದೆ. ಇಂದು ಮಧ್ಯಾಹ್ನ ಮುರುಗಮಲ್ಲದಿಂದ ಚಿಂತಾಮಣಿ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಚಿಂತಾಮಣಿಯಿಂದ ಮುರುಗಮಲ್ಲ ಕಡೆಗೆ ತೆರಳುತ್ತಿದ್ದ ಟಾಟ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 11ಮಂದಿ ಮೃತಪಟ್ಟಿದ್ದು, ಗಾಯಾಳುಗಳನ್ನು ಚಿಂತಾಮಣಿ ಹಾಗೂ ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.