ಖಾಸಗಿ ಬಸ್​ಗೆ ಕಾರು ಡಿಕ್ಕಿ- ಮೂವರು ಸಾವು…

37
firstsuddi

ಹುಬ್ಬಳ್ಳಿ: ಖಾಸಗಿ ಬಸ್​ಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ.

ಕಾರಿನಲ್ಲಿದ್ದ ನಾಲ್ವರು ಆಂಧ್ರ ಕರ್ನೂಲು ಜಿಲ್ಲೆಯವರು. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.