ಖ್ಯಾತ ಖಳನಟ ಕಜನ್ ಖಾನ್ ನಿಧನ…

68
firstsuddi

ಖ್ಯಾತ ಖಳನಟ ಕಜನ್ ಖಾನ್ ಅವರು ನಿಧನರಾಗಿದ್ದಾರೆ.

ನಿನ್ನೆ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

1992ರಲ್ಲಿ ತೆರೆಕಂಡ ಸೆಂತಮೀಜ್ ಪಾಟ್ವು ಎಂಬ ತಮಿಳು ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ನಂತರ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದರು. 1999ರಲ್ಲಿ ತೆರೆಕಂಡ ಹಬ್ಬ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದರು. ಹಬ್ಬ ಬಳಿಕ ಅವರು ನಾಗದೇವತೆ ಸಿನಿಮಾದಲ್ಲಿ ಖಳನಟರಾಗಿ ಕಾಣಿಸಿಕೊಂಡಿದ್ದರು.

ಕನ್ನಡ, ತಮಿಳು, ಮಲಯಾಳಂ ಸಿನಿಮಾ ರಂಗದಲ್ಲಿ ವಿಲನ್ ಪಾತ್ರದ ಮೂಲಕವೇ ಗುರುತಿಸಿಕೊಂಡಿದ್ದ ಕಜನ್ ಖಾನ್, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಕಜನ್ ಖಾನ್ ನಿಧನಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಖ್ಯಾತ ನಟನ ಸಾವಿನಿಂದ ಚಿತ್ರರಂಗಕ್ಕೆ ಆಘಾತ ಆಗಿದೆ.