ಗಂಡು ಮಗುವಾಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪಾಪಿ ಪತಿ!

52
firstsuddi

ಮೈಸೂರು : ಗಂಡು ಮಗುವಾಗಿಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ಪಾಪಿ ಪತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕು ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪತಿ ಚಂದ್ರು, ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಚಂದ್ರು ತಂದೆ ರಾಮೇಗೌಡ ಹಾಗೂ ತಾಯಿ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಶಿವಮ್ಮ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಗಂಡು ಮಗುವಿಗಾಗಿ ಶಿವಮ್ಮನಿಗೆ ಪತಿ ಹಾಗೂ ಮನೆಯವರು ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಹಲವು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ರೂ ಪ್ರಯೋಜನವಾಗಿರಲಿಲ್ಲ.

ಇತ್ತ ಕಿರುಕುಳ ತಾಳಲಾರದೆ ಶಿವಮ್ಮ ಹೆಚ್.ಡಿ.ಕೋಟೆ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಪತಿ ಚಂದ್ರುವನ್ನು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ರಾಮೇಗೌಡ, ಕೆಂಪಮ್ಮಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.