ಶ್ರೀನಗರ : ಗಡಿಯಲ್ಲಿ ಪಾಕ್ ಸೈನಿಕರು ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಪಾಕ್ ಯೋಧರ ಗುಂಡಿನ ದಾಳಿಗೆ ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರಾದ ಮಾಚಿಲ್ ಸೆಕ್ಟರ್ ಸಮೀಪ ಪಾಕ್ ಸೈನಿಕರು ಕದನ ವಿರಾಮ ವಿರಾಮ ಉಲ್ಲಂಘಿಸಿ ಪಿರಂಗಿಯನ್ನು ಉಪಯೋಗಿಸಿಕೊಂಡು ಭಾರತೀಯ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಪಾಕ್ ಸೈನಿಕರು ನಡೆಸಿದ ದಾಳಿಗೆ ಭಾರತೀಯ ಯೋಧಯೊಬ್ಬರು ಗಾಯಗೊಂಡಿದ್ದು, ಕೂಡಲೇ ಅವರನ್ನು ಸಮೀಪದ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










