ಗಣರಾಜ್ಯೋತ್ಸವ ಪರೇಡ್ : ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ…

62
firstsuddi

ನವದೆಹಲಿ: 73ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಸಿಕ್ಕಿದೆ.

ಈ ಬಾರಿಯ ಪರೇಡ್ ನಲ್ಲಿ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತು ನಿರ್ಮಾಣಗೊಂಡಿದ್ದ ಸ್ತಬ್ಧಚಿತ್ರಕ್ಕೆ ಮೊದಲ ಸ್ಥಾನ ಸಿಕ್ಕಿದ್ದು, ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರಕ್ಕೆ ಮೂರನೇ ಸ್ಥಾನ ಸಿಕ್ಕಿದೆ.

ಗಣರಾಜ್ಯೋತ್ಸವ ಪರೇಡ್ 2022ರಲ್ಲಿ ‘ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ಕರ್ನಾಟಕದ ಟ್ಯಾಬ್ಲೋ 2ನೇ ಸ್ಥಾನವನ್ನು ಗೆದ್ದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.