ಗಣೇಶ ವಿಸರ್ಜನೆ ವೇಳೆ ಕಿಡಿ ಹೊತ್ತಿಸಿದ ಕಿಡಿಗೇಡಿಗಳು: ದಾವಣಗೆರೆಯಲ್ಲೂ ಕಲ್ಲುತೂರಾಟ.

51

ದಾವಣಗೆರೆ: ರಾಜ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆಗಳು ಹೆಚ್ಚಾಗುತ್ತಿರುವುದು ವರದಿಯಾಗುತ್ತಿವೆ. ದಾವಣಗೆರೆಯಲ್ಲೂ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಕೆಲ ಕಾಲ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಪೊಲೀಸರು ಹೈರಾಣಾಗಿದ್ದಾರೆ. ಕಳೆದ ದಿನ ದಾವರಣಗೆರೆಯ ಬೇತೂರು ರಸ್ತೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಸಂಜೆ ನಗರದ ಮುದ್ದ ಭೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶನನ್ನು ನಗರದ ಅರಳಿ ಮರ ಸರ್ಕಲ್‍ನಲ್ಲಿ ಮೆರವಣಿಗೆ ಮಾಡುವಾಗ ಕಲ್ಲು ತೂರಾಟ ನಡೆದಿದೆ. ಈ ವೇಳೆ ಸರ್ಕಲ್ ಇನ್ಸ್‍ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಅಧಿಕಾರಿ  ರಘು ಎಂಬುವವರಿಗೆ ಗಾಯಗಳಾಗಿವೆ.
ಗಣೇಶ ಮೆರವಣಿಗೆ ಸಾಗಿದ ಕಡೆಗಳಲೆಲ್ಲಾ ಕಿಡಿಗೇಡಿಗಳು ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾರೆ. ಕೂಡಲೇ ಮುಸ್ಲಿಂ ಮುಖಂಡರು ಹಾಗೂ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕಳೆದೆರೆಡು ದಿನಗಳ ಹಿಂದೆ ಮಂಡ್ಯದ ನಾಗಮಂಗಲದಲ್ಲಿ ನಡೆದ ಕಲ್ಲು ತೂರಾಟ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಮಾಡಿದ್ದನ್ನು ಹಿಂದೂ ಮುಖಂಡರು ಖಂಡಿಸಿ ಪ್ರತಿಭಟನೆ ಮಾಡಿದ್ದರು.
ಈ ವೇಳೆ ಹಿಂದೂ ಜಾಗರ ವೇದಿಕೆಯ ಪ್ರಾಂತ್ಯ ಸಂಚಾಲಕ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಮುಸ್ಲಿಂ ಮುಖಂಡನೊಬ್ಬ ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಸವಾಲ್ ಹಾಕಿದ್ದನು. ಇದೇ ಕಾರಣಕ್ಕೆ ಗಲಾಟೆ ನಡೆದಿದೆ. ಕಳೆದ ದಿನ ಗಣೇಶ ಮೆರವಣಿಗೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ನೆರೆದ ಮುಸ್ಲಿಮರು ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಕಲ್ಲು ತೂರಾಟ ನಡೆದಿದೆ. ಇನ್ನೂ ಕಲ್ಲು ತೂರಿದ 18 ಆರೋಪಿಗಳನ್ನು ಪೋಲಿಸರು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.