ಮಡಿಕೇರಿ : ಗದ್ದೆ ಬಯಲಿಗೆ ಮಗುಚಿ ಬಿದ್ದ ಬೆಂಗಳೂರು-ಎರ್ನಾಕುಲಂ ಐರಾವತ ಬಸ್…!

234
firstsuddi

ಮಡಿಕೇರಿ : ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಗದ್ದೆ ಬಯಲಿಗೆ ಉರುಳಿ ಬಿದ್ದಿರುವ ಘಟನೆ ಪೊನ್ನಂಪೇಟೆ ಸಮೀಪದ ಬೇಗೂರು ಗ್ರಾಮದ ಬಳಿ ನಡೆದಿದೆ. ರಾತ್ರಿ 10 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ಬಸ್ ಮುಂಜಾನೆ 2 ಗಂಟೆ ಸುಮಾರಿಗೆ ಪೊನ್ನಂಪೇಟೆ ಮಾರ್ಗವಾಗಿ ಎರ್ನಾಕುಲಂ ಕಡೆಗೆ ತೆರಳುತ್ತಿತ್ತು. ಈ ವೇಳೆ ವಿಪರೀತ ಮಂಜು ಕವಿದ ವಾತಾವರಣ ಇದ್ದ ಕಾರಣ ಚಾಲಕನಿಗೆ ರಸ್ತೆ ಕಾಣದೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಬಸ್‍ನಲ್ಲಿ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಒಟ್ಟು 30ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟಾವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.