ಗರ್ಭಿಣಿ ಮೇಲೆ ಅಪ್ರಾಪ್ತ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ!

67
firstsuddi

ಅಮರಾವತಿ : ಓರ್ವ ಅಪ್ರಾಪ್ತ ಸೇರಿ ಮೂವರಿಂದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ.

ಮಹಿಳೆಯು ತನ್ನ ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ನಲ್ಲಿ ಮಲಗಿದ್ದ ವೇಳೆ ಮೂವರು ಅವರ ಬಳಿಗೆ ಬಂದು ಪತಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಗರ್ಭಿಣಿಯನ್ನು ಸಮೀಪದ ಪೊದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಮೂವರು ಆರೋಪಿಗಳು ಕುಡಿದ ಅಮಲಿನಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ ರೆಡ್ಡಿ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆ ವಾಸಿರೆಡ್ಡಿ ಪದ್ಮಾ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಸದ್ಯ ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್, ಒಂಗೋಲ್)ಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರೆಪಲ್ಲೆ ಪೊಲೀಸರು ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಿದ್ದಾರೆ.