ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದ ಫೈನಾನ್ಸ್ ಕಂಪನಿ ಅಧಿಕಾರಿಗಳು!

62
firstsuddi

ರಾಂಚಿ : ರೈತನ ಟ್ರ್ಯಾಕ್ಟರ್ ಜಪ್ತಿ ವೇಳೆ ಫೈನಾನ್ಸ್ ಕಂಪನಿ ಅಧಿಕಾರಿಗಳು ಆತನ ಗರ್ಭಿಣಿ ಮಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ನಡೆದಿದೆ.

ವಿಕಲಚೇತನ ರೈತ ಮಿಥಿಲೇಶ್ ಮೆಹ್ತಾ ಅವರು ಟ್ರ್ಯಾಕ್ಟರ್ ಖರೀದಿಗೆ ಫೈನಾನ್ಸ್ ಕಂಪನಿಯಿಂದ ಹಣ ಪಡೆದಿದ್ದರು. ಆದರೆ ಸರಿಯಾದ ಸಮಯದಲ್ಲಿ ಹಣ ಪಾವತಿಸಲು ಸಾಧ್ಯವಾಗಿಲ್ಲ. ಹಣ ಪಾವತಿಸದ್ದಕ್ಕಾಗಿ ಫೈನಾನ್ಸ್ ಕಂಪನಿಯವರು ರೈತನ ಮನೆಗೆ ತೆರಳಿ ಟ್ರ್ಯಾಕ್ಟರ್ ಹಿಂಪಡೆಯಲು ಮುಂದಾಗಿದ್ದಾರೆ.

ಆದರೆ ಈ ಬಗ್ಗೆ ಅವರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹಾಗೂ ರೈತನ ಮಗಳ ನಡುವೆ ವಾಗ್ವಾದ ನಡೆದಿದೆ.  ಗರ್ಭಿಣಿ ಮಹಿಳೆ ಟ್ರ್ಯಾಕ್ಟರ್​ ತೆಗೆದುಕೊಂಡು ಹೋಗುವುದನ್ನು ವಿರೋಧಿಸಿದ್ದಾರೆ. ಈ ವೇಳೆ, ಕ್ರೂರಿ ಫೈನಾನ್ಸ್ ಅಧಿಕಾರಿಗಳು ಅಡ್ಡ ಬಂದ ಆಕೆಯ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿದ್ದಾರೆ. ತಕ್ಷಣವೇ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಫೈನಾನ್ಸ್ ಕಂಪನಿ ಮೇಲೆ ಕೊಲೆ ಕೇಸ್ ದಾಖಲಿಸಿಕೊಳ್ಳಲಾಗಿದೆ. ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲು ರೈತರ ಮನೆಗೆ ಹೋಗುವ ಮುನ್ನ ಫೈನಾನ್ಸ್ ಕಂಪನಿಯ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೂ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಹಜಾರಿಬಾಗ್ ಎಸ್‍ಪಿ ಮನೋಜ್ ರತನ್ ಚೋಥೆ ಅವರು ತಿಳಿಸಿದ್ದಾರೆ.