ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಭಾರತೀಯ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಮಾತು.

33

ಭಾರತ ಹಾಗೂ ಚೀನಾ ತಮ್ಮ ಸೇನೆಯನ್ನು ವಾಪಸ್ಸು ಪಡೆದುಕೊಳ್ಳಲು ಮತ್ತು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗಲು ಹೊಸ ಒಪ್ಪಂದವನ್ನು ಮಾಡಿಕೊಂಡಿವೆ. ಈ ಕುರಿತು ಭಾರತೀಯ ಸೇನಾ ಮುಖ್ಯಸ್ಥರಾದ ಉಪೇಂದ್ರ ದ್ವಿವೇದಿ ಇಂದು ಮಾತನಾಡಿದರು. 2020ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಗು ಮುನ್ನ ಪೂರ್ವ ಲಡಾಖ್‍ನಲ್ಲಿ ಎಲ್‍ಎಸಿ ಉದ್ದಕ್ಕೂ ಗಸ್ತು ವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಪರಸ್ಪರ ಒಪ್ಪಿಗೆ ಇದೆ. ಉಭಯ ದೇಶಗಳ ನಡುವೆ ಗಡಿಯಲ್ಲಿ ಶಾಂತಿ ಇಲ್ಲದಿದ್ದರೆ ದ್ವಿಪಕ್ಷೀಯ ಸಂಬಂಧ ಹೇಗೆ ಸುಧಾರಿಸುತ್ತದೆ ಎಂದು ಹೇಳಿದರು. ಈ ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಿಗೆ ಅನ್ವಯಿಸುತ್ತದೆ ಎಂದಿದ್ದಾರೆ.
ಶೀಘ್ರದಲ್ಲೇ ಎರಡೂ ದೇಶಗಳು ತಮ್ಮ ಸೇನೆಯನ್ನು ವಾಪಸ್ಸು ಪಡೆದುಕೊಳ್ಳಲು ಪ್ರಾರಂಭಿಸುತ್ತವೆ, ಈ ವ್ಯವಸ್ಥೆಯನ್ನು ಮಿಲಿಟರಿ ಪರಿಭಾಷೆಯಲ್ಲಿ ಡಿಎಂಗೇಜ್‍ಮೆಂಟ್ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಸೋಮವಾರ ವಿದೇಶಾಂಗ ಕಾರ್ಯದರ್ಶಿಯಾದ ವಿಕ್ರಮ್ ಮಿಶ್ರಿ ಅವರು ಮಾಹಿತಿ ನೀಡಿದ್ದರು. ಗಸ್ತು ವ್ಯವಸ್ಥೆಗೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವಿನ ಒಪ್ಪಂದದಿಂದಾಗಿ 2020 ರಲ್ಲಿ ಪೂರ್ವ ಲಡಾಖ್‍ನಲ್ಲಿ ಉದ್ಭವಿಸಿದ ಉದ್ವಿಗ್ನತೆಯನ್ನು ಕ್ರಮೇಣ ಪರಿಹರಿಸಲಾಗುತ್ತಿದೆ ಎಂದು ಹೇಳಿದ್ದರು. ಉಭಯ ದೇಶಗಳ ನಡುವೆ ಗಡಿಯಲ್ಲಿ ಶಾಂತಿ ಇಲ್ಲದಿದ್ದರೆ ದ್ವಿಪಕ್ಷೀಯ ಸಂಬಂಧ ಹೇಗೆ ಸುಧಾರಿಸುತ್ತದೆ ಎಂದರು. ಆಗಸ್ಟ್ 29 ರಂದು ಬೀಜಿಂಗ್‍ನಲ್ಲಿ ಚೀನಾ ಮತ್ತು ಭಾರತ ನಡುವಿನ ಗಡಿ ಕುರಿತು ಬಗ್ಗೆ ಸುಧೀರ್ಘ ಸಭೆ ನಡೆಯಿತು. ಎಲ್‍ಎಸಿಗೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವೆ ಆರಂಭವಾದ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಮತ್ತು ಭಿನ್ನಾಭಿಪ್ರಾಯಗಳನ್ನು ಕೊನೆಗೊಳಿಸಲು ಚರ್ಚೆಗಳು ನಡೆದವು. ಈ ಸಭೆಗು ಮುನ್ನ ಸೆಪ್ಟೇಂಬರ್ 12 ರಂದು ಜಿನೀವಾದಲ್ಲಿ ನಡೆದ ಶೃಂಗಸಭೆಯಲ್ಲಿ ಭಾರತ ಮತ್ತು ಚೀನಾ ದೇಶಗಳ ನಡುವಿನ ಶೇ.75ರಷ್ಟು ವಿವಾದ ಬಗೆಹರಿದಿದೆ ಎಂದು ವಿದೇಶಾಂಗ ಸಚಿವರು ಹೇಳಿದ್ದರು. 2020 ರಲ್ಲಿ ಗಾಲ್ವಾನ್‍ನಲ್ಲಿ ಚೀನಾ ಮತ್ತು ಭಾರತ ದೇಶಗಳ ನಡುವೆ ಘರ್ಷಣೆ ನಡೆದಿತ್ತು. ಜೂನ್ನಲ್ಲಿ ನಡೆದ ಈ ಘರ್ಷಣೆಯಲ್ಲಿ ಗೊಲ್ವಾನ್ ನ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು.