ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜನ್ನು ಪುಡಿ ಮಾಡಿದ ಪುಂಡರು..!

80
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ವಿಜಯನಗರದ ಆರ್.ಪಿ.ಸಿ ಲೇಔಟ್ ನಲ್ಲಿ ತಡರಾತ್ರಿ ಗಾಂಜಾ ನಶೆಯಲ್ಲಿದ್ದ ಇದೇ ನಗರದ ಮೂವರು ಪುಂಡರು ವಾಹನಗಳ ಗ್ಲಾಸ್ ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ. ಪುಂಡರ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಿಜಯನಗರ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಕುರಿತು ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.