ಗಾಂಧಿ ಕುಟುಂಬದ ಯಾರೊಬ್ಬರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲ್ಲ : ಅಶೋಕ್ ಗೆಹ್ಲೋಟ್.

59
firstsuddi

ತಿರುವನಂತಪುರಂ : ಗಾಂಧಿ ಕುಟುಂಬದ ಯಾರೊಬ್ಬರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

ಕೇರಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದೆ. ನೀವೇ ಅಧ್ಯಕ್ಷರಾಗುವಂತೆ ಹಲವಾರು ಬಾರಿ ವಿನಂತಿಸಿದೆ. ಆದರೆ ಅವರು ಒಪ್ಪಿಲ್ಲ, ಇದೀಗ ಗಾಂಧಿ ಕುಟುಂಬದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಅವರು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ನಿರ್ಧರಿಸಿದ್ದೇನೆ. ನಾಮಪತ್ರ ಸಲ್ಲಿಕೆ ದಿನಾಂಕ ಶೀಘ್ರದಲ್ಲೇ ನಿಗದಿಪಡಿಸಲಿದ್ದೇನೆ ಎಂದು ಅಶೋಕ್ ಗೆಹ್ಲೋಟ್ ಹೇಳಿದರು.