ಗಾಜಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಅನುಮೋದನೆ.

31

ಜೆರುಸಲೇಂ: ಇಸ್ರೇಲ್‍ನ ಸಚಿವ ಸಂಪುಟ ಇಂದು ಗಾಜಾ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದವನ್ನು ಅನುಮೋದಿಸಲು ಮತ ಚಲಾಯಿಸಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಲಾಗಿದೆ. ಈ ವಾರಾಂತ್ಯದಲ್ಲಿ ಕದನ ವಿರಾಮ ಜಾರಿಗೆ ಬರುತ್ತದೆಯೇ ಎಂಬ ಬಗ್ಗೆ ಇದ್ದ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಕದನ ವಿರಾಮ ನಾಳೆಯಿಂದ ಪ್ರಾರಂಭವಾಗಲಿದೆ. ಗಾಜಾದ ಅತ್ಯಂತ ಮಾರಕ ಯುದ್ಧ ಮತ್ತು ಬಾಂಬ್ ದಾಳಿ ನಿಲ್ಲಲಿದೆ. ಇಸ್ರೇಲ್ ಜೈಲುಗಳಲ್ಲಿರುವ ನೂರಾರು ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆಯಾಗಲಿದ್ದಾರೆ. 2023 ರ ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರ ಗುಂಪು ಇಸ್ರೇಲ್ ಮೇಲೆ ದಾಳಿ ಮಾಡಿ ಪ್ರದೇಶದಲ್ಲಿ ಬಂಧಿಸಲ್ಪಟ್ಟ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಸಹ ಅನುವು ಮಾಡಿಕೊಡುತ್ತದೆ. ಸರ್ಕಾರ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಯೋಜನೆಯನ್ನು ಅನುಮೋದಿಸಿದೆ ಎಂದು ಕ್ಯಾಬಿನೆಟ್ ಮತದಾನದ ಬಳಿಕ ಇಂದು ಬೆಳಿಗ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ.