ಗೀಸರ್ ಗ್ಯಾಸ್ ಸೋರಿಕೆ- ಸ್ನಾನಕ್ಕೆ ತೆರಳಿದ್ದ ಯುವತಿ ಸಾವು…

51
firstsuddi

ಬೆಂಗಳೂರು: ಗೀಸರ್‌ನ ಗ್ಯಾಸ್ ಸೋರಿಕೆಯಾಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಗರದ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ನಡೆದಿದೆ.

ರಾಜೇಶ್ವರಿ (23) ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಇಂದು ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.

ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಮನೆಯವರು ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ರಾಜೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಆದಾಗಲೇ ರಾಜೇಶ್ವರಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.