ಗುಂಡ್ಲುಪೇಟೆ ಗಣಿಯಲ್ಲಿ ಗುಡ್ಡ ಕುಸಿತ : ಇಬ್ಬರು ಸಾವು?

80
firstsuddi

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಹಲವು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜೆಸಿಬಿ, ಟಿಪ್ಪರ್ ವಾಹನ, ಟ್ರಾಕ್ಟರ್ ಗಳು ನಜ್ಜುಗುಜ್ಜಾಗಿದೆ. ಗಾಯಾಳುಗಳು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿ ಕೇರಳ, ತಮಿಳುನಾಡು ಸೇರಿ ಇತರ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆ ಬಳಿಕವಷ್ಟೇ ಎಲ್ಲವೂ ತಿಳಿದುಬರಬೇಕಿದೆ.