ಚಾಮರಾಜನಗರ: ಟಿಪ್ಪರ್ ಲಾರಿ ಹರಿದು ಕೇರಳ ಮೂಲದ ಮೂವರು ದುರ್ಮರಣ ಹೊಂದಿರುವ ಘಟನೆ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸುಲ್ತಾನ್ ಬತ್ತೇರಿ ತಾಲೂಕಿನ ಮಲವಾಯಿಲ್ ಗ್ರಾಮದವರಾದ ಧನೇಶ್ಮೋಹನ್(29) ಪತ್ನಿ ಅಂಜು(24) ಮತ್ತು ಮಗು ವಿಚ್ಚು(2) ಮೃತರು.
ಕೇರಳ ಮೂಲದ ಪತಿ, ಪತ್ನಿ ಮತ್ತು ಮಗ ಮೂವರು ಒಂದೇ ಬೈಕ್ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್ನಲ್ಲಿ ಬರುತ್ತಿದ್ದಾಗ ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆಎ-11-ಬಿ-8497 ನೋಂದಣಿಯ ಟಿಪ್ಪರ್ ಲಾರಿಯು ಮುಂಬದಿ ಹೋಗುತ್ತಿದ್ದ ಕೇರಳ ಮೂಲದ ಬೈಕ್ಗೆ ಗುದ್ದಿದ್ದಾನೆ. ಬಳಿಕ ಬೈಕ್ ಸವಾರನ ಮೇಲೆ ಲಾರಿ ಹರಿದು ದೇಹ ರಸ್ತೆಯಲ್ಲೇ ಬಿದ್ದಿದ್ದು, ಇನ್ನಿಬ್ಬರು ಲಾರಿ ಅಡಿಯಲ್ಲಿ ಬೈಕ್ ಸಮೇತ ಸಿಲುಕಿಕೊಂಡು 300 ಮೀಟರ್ನಷ್ಟು ದೂರಕ್ಕೆ ಎಳೆದುಕೊಂಡು ಬಂದಿದೆ. ಇನ್ನು ಚಾಲಕ ಟಿಪ್ಪರ್ ಅನ್ನು ಕುಡಿದ ಮತ್ತಿನಲ್ಲಿ ಚಾಲನೆ ಮಾಡಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಭಾರ ಹೊತ್ತ ವಾಹನ ಸಾಗುವಾಗ ಅಜಾರೂಕ ಚಾಲನೆ ಮಾಡಿದ್ದಾನೆ. ಬೈಕ್ಗೆ ಡಿಕ್ಕಿಯಾದ ನಂತರವೂ ಟಿಪ್ಪರ್ ಅನ್ನು ನಿಯಂತ್ರಿಸದ ಕಾರಣ 300 ಮೀಟರ್ ದೂರದವರೆಗೆ ಮೃತದೇಹಗಳನ್ನು ಟಿಪ್ಪರ್ ಎಳೆದೋಯ್ದಿದೆ ಎಂದು ಪ್ರತ್ಯೇಕ್ಷದರ್ಶಿಗಳು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿ ಟಿಪ್ಪರ್ ಮತ್ತು ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಮಾಹಿತಿ ನೀಡಿದ ಹಿನ್ನೆಲೆ ಮೃತರ ವಾರಸುದಾರರು ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹಗಳನ್ನು ಅವರ ವಶಕ್ಕೆ ನೀಡಲಾಗುತ್ತದೆ. ಘಟನೆ ಸಂಬಂಧ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಗುಂಡ್ಲುಪೇಟೆ ಪೋಲೀಸರು ಮಾಹಿತಿ ನೀಡಿದ್ದಾರೆ.










