ಗುಜರಾತ್‍ನಲ್ಲಿ ಮೊದಲ ಹಂತದ ಮತದಾನ ಆರಂಭ…

63
firstsuddi

ಗಾಂಧಿನಗರ : ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತವರು ರಾಜ್ಯ ಗುಜರಾತ್ ನ 19 ಜಿಲ್ಲೆಗಳ 89 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇಂದು ಸಂಜೆ 5 ಗಂಟೆಯೊಳಗೆ ಒಟ್ಟು 2,39,76,670 ಮತದಾರರು 14,382 ಮತದಾನ ಕೇಂದ್ರಗಳಲ್ಲಿ ಮತದಾನ ಮಾಡಲಿದ್ದಾರೆ. ಈ ಮೂಲಕ ಮೊದಲ ಹಂತದ ಚುನಾವಣಾ ಕಣದಲ್ಲಿರುವ 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಮೊದಲ ಹಂತದ ವ್ಯಾಪ್ತಿಯಲ್ಲಿ ಒಟ್ಟು 2,39,76,670 ಮತದಾರರು ನೋಂದಣಿಯಾಗಿದ್ದಾರೆ. ಇದರಲ್ಲಿ 1,24,33,362 ಪುರುಷರು, 1,15,42,811 ಮಹಿಳೆಯರು ಮತ್ತು 497 ತೃತೀಯಲಿಂಗಿ ಮತದಾರರಿದ್ದಾರೆ. ರಾಜ್ಯದಲ್ಲಿ ಒಟ್ಟು 4,91,35,400 ಮತದಾರರು ನೋಂದಣಿಯಾಗಿದ್ದಾರೆ.

ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.