ಗುರುಪ್ರಸಾದ್ ಕೊನೆಯ ಚಿತ್ರ ‘ಎದ್ದೇಳು ಮಂಜುನಾಥ 2’ ಸಿನಿಮಾ ಬಿಡುಗಡೆಗೆ ತಡೆ.

48

ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ನಟಿಸಿ ನಿರ್ದೇಶನ ಮಾಡಿರುವ ಎದ್ದೇಳು ಮಂಜುನಾಥ್ 2 ಸಿನಿಮಾ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರು ರಮೇಶ್ ಮತ್ತು ರವಿ ದೀಕ್ಷಿತ್ ನಿರ್ಮಾಣ ಮಾಡಿದ ಸಿನಿಮಾ ನಾಳೆ ಬಿಡುಗಡೆಯಾಗಬೇಕಿತ್ತು. ಈ ಚಿತ್ರ ಬಿಡುಗಡೆಯಾಗದಂತೆ ಗುರುಪ್ರಸಾದ್ 2ನೇ ಪತ್ನಿ ಸುಮಿತ್ರಾ ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ. ಸಿನಿಮಾದಲ್ಲಿ ಬಂದ ಲಾಭದಿಂದ ಶೇಕಡ 50 ರಷ್ಟು ಹಣವನ್ನು ಗುರುಪ್ರಸಾದ್ ಕುಟುಂಬಕ್ಕೆ ನೀಡುವುದಾಗಿ ಹೇಳಿದ್ದೆವು. ಆದರೆ ಬಿಡುಗಡೆಗೂ ಮುನ್ನ 4 ಲಕ್ಷ ರೂಪಾಯಿಗೆ ಸುಮಿತ್ರಾ ಬೇಡಿಕೆ ಇಟ್ಟಿದ್ದಾರೆ. ಸುಮಿತ್ರಾಗೆ ಮುಂಗಡ ಹಣ ನೀಡದ್ದಕ್ಕೆ ತಡೆಯಾಜ್ಞೆ ತಂದಿದ್ದಾರೆ ಎಂದು ನಿರ್ಮಾಪಕ ರಮೇಶ್ ತಿಳಿಸಿದ್ದಾರೆ.
‘ಎದ್ದೇಳು ಮಂಜುನಾಥ’ ಸಿನಿಮಾದ ಸಕ್ಸಸ್ ಬಳಿಕ ‘ಎದ್ದೇಳು ಮಂಜುನಾಥ 2’ ಸಿನಿಮಾವನ್ನು ನಿರ್ದೇಶಿಸಿ, ಅದರಲ್ಲಿ ಹೀರೋ ಕೂಡ ಆಗಿದ್ದರು ಗುರುಪ್ರಸಾದ್. ಆದರೆ ಸಿನಿಮಾ ರಿಲೀಸ್ ಮೊದಲೇ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡರು. ಹೇಗೋ ಬಾಕಿ ಉಳಿದಿದ್ದ ಕೆಲಸಗಳನ್ನೆಲ್ಲಾ ಪೂರ್ಣಗೊಳಿಸಿ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರು ಮುಂದಾಗಿದ್ದರು. ಅಷ್ಟರಲ್ಲೇ ನಿಸಿಮಾ ರಿಲೀಸ್ ಮಾಡದಂತೆ ನಿರ್ಮಾಪಕರಿಗೆ, ಕೋರ್ಟ್ ದೊಡ್ಡ ಶಾಕ್ ನೀಡಿದೆ. ಗುರುಗೆ ಅವರ ಕೊನೆಯ ಸಿನಿಮಾ ಮೂಲಕ ಗೌರವನ್ನು ಸಲ್ಲಿಸೋಕೆ ಆಗದೆ ಚಿತ್ರದ ನಿರ್ಮಾಪಕರು ಬದ್ದಾಡುವಂತ ಪರಿಸ್ಥಿತ ಎದುರಾಗಿದೆ.
ಈ ಬಗ್ಗೆ ಮಾತನಾಡಿದ ಸುಮಿತ್ರಾ, ಸಿನಿಮಾ ಪೂರ್ಣ ಮಾಡಬೇಕು ಎಂದು ಕಂಟೆಂಟ್ ತೆಗೆದುಕೊಂಡಿದ್ದಾರೆ. ನನ್ನ ಪತಿ ಮೃತದೇಹದ ಅಂತ್ಯಕ್ರಿಯೆಯೂ ಆಗಿರಲಿಲ್ಲ. ಆಗಲೇ ಕಂಟೆಂಟ್ ಕೊಡಿ ಎಂದು ಕೇಳಿದ್ದರು. ಸಿನಿಮಾ ಮುಗಿಸಲಿ ಎಂದು ನಾನು ಕೂಡ ಕಂಟೆಂಟ್ ನೀಡಿದೆ. ಗುರುಪ್ರಸಾದ್ ಬ್ಯಾನರ್‍ನಲ್ಲಿ ಸಿನಿಮಾ ಮಾಡುವುದಾಗಿ ನಿರ್ಮಾಪಕರು ಹೇಳಿದ್ದರು. ಆದರೆ ಈಗ ಎಲ್ಲವನ್ನೂ ತಮ್ಮ ಬ್ಯಾನರ್‍ನಲ್ಲೇ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಕಥೆ, ಚಿತ್ರಕಥೆ ಎಲ್ಲಾ ನನ್ನ ಪತಿಯದ್ದು. ಆದ್ರೆ ಸಿನಿಮಾ ಮುಗಿದ ಮೇಲೆ 51% ರಷ್ಟು ಲಾಭ ತೆಗೆದುಕೊಳ್ಳಿ ಎಂದು ಹೇಳಿದರು. ನನ್ನ ಮಗು ಭವಿಷ್ಯಕ್ಕೆ ನಾನೆಲ್ಲಿ ಹೋಗಲಿ? ಸಿನಿಮಾ ಆಡಿಯೋ ರಿಲೀಸ್ ವೇಳೆಯೇ ನನಗೆ ಈ ವಿಚಾರ ಗೊತ್ತಾಗಿದೆ ಎಂದು ಹೇಳಿದರು.