ರಾಮನಗರ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಲಕ್ಷ್ಮೀಪುರ
ಗ್ರಾಮದ ಬಳಿ ನಡೆದಿದೆ.
ಟ್ಯೂಶನ್ ಮುಗಿಸಿ ಮನೆಗೆ ಹೊಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳನ್ನು ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು.
ಆದರೆ ಚಿಕಿತ್ಸೆ ಫಲಿಸದೇ ರೋಹಿತ್ (5), ಶಾಲಿನಿ (8) ಮೃತಪಟ್ಟಿದ್ದಾರೆ. ಉಳಿದ ಸುಚಿತ್, ಗೌತಮಿ, ಲೇಖನಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಎಎಸ್‍ಪಿ ಸುರೇಶ್ ಭೇಟಿ ನೀಡಿ ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಮಕ್ಕಳಿಗೆ ಗುದ್ದಿದ ಚಾಲಕ ತನ್ನ ಗೂಡ್ಸ್ ವಾಹನವನ್ನು ಬೇರೆಡೆ ನಿಲ್ಲಿಸಿ ಪರಾರಿಯಾಗಿದ್ದಾನೆ. ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










