ಗೃಹಿಣಿ ಆತ್ಮಹತ್ಯೆ ; ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರ ಆರೋಪ…

64
firstsuddi

ಹಾಸನ : ಗೃಹಿಣಿಯೊಬ್ಬರು ಗಂಡನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ. ರಂಜಿತಾ(31) ಆತ್ಮಹತ್ಯೆಗೆ ಶರಣಾದವರು.

ಕಳೆದ ಹತ್ತು ವರ್ಷದ ಹಿಂದೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ ಅವರನ್ನು, ಹಾಸನದ ವಿದ್ಯಾನಗರ ನಿವಾಸಿ ಅಕ್ಷಯ್ ಗೆ ಮದುವೆ ಮಾಡಿಕೊಡಲಾಗಿತ್ತು. ಹತ್ತು ವರ್ಷ ಕಳೆದರೂ ದಂಪತಿಗೆ ಮಕ್ಕಳಿರಲಿಲ್ಲ. ಗಂಡ ಅಕ್ಷಯ್ ಹಾಗೂ ಮನೆಯವರು ನಿರಂತರವಾಗಿ ರಂಜಿತಾಗೆ ಕಿರುಕುಳ ನೀಡುತ್ತಿದ್ದರು. ಗಂಡನ ಮನೆಯವರೇ ಕೊಲೆ ಮಾಡಿ ನಂತರ ನೇಣು ಹಾಕಿದ್ದಾರೆ ಎಂದು ರಂಜಿತಾ ಪೋಷಕರು ಆರೋಪ ಮಾಡುತ್ತಿದ್ದಾರೆ.

ಅಷ್ಟೇ ಅಲ್ಲದೇ ಮಗಳ ಸಾವಿನಿಂದ ರೊಚ್ಚಿಗೆದ್ದ ರಂಜಿತಾ ಸಂಬಂಧಿಕರು ಅಕ್ಷಯ್ ಮನೆ ಮುಂದೆ ಗಲಾಟೆ ಮಾಡಿದ್ದಾರೆ. ಈ ವೇಳೆ ಎರಡು ಕುಟುಂಬಸ್ಥರ ನಡುವೆ ಮಾರಾಮಾರಿ ನಡೆದಿದೆ. ಸ್ಥಳಕ್ಕೆ ಬಂದ ಪೊಲೀಸರು ಉದ್ರಿಕ್ತರನ್ನ ಚದುರಿಸಿದ್ದಾರೆ. ಹಾಸನ ಬಡಾವಣೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.