ಉತ್ತರ ಪ್ರದೇಶ : ಉತ್ತರ ಪ್ರದೇಶದ ಗೋರಖ್ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣಾ ಅಖಾಡಕ್ಕಿಳಿದಿದ್ದಾರೆ.
ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುನ್ನ ಗೋರಖನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದ ಅವರು, ಹೋಮ-ಹವನದಲ್ಲಿ ಭಾಗಿಯಾದರು. ಯೋಗಿ ಆದಿತ್ಯನಾಥ್ ಅವರಿಗೆ ಗೃಹ ಸಚಿವ ಅಮಿತ್ ಶಾ ಸಹ ಸಾಥ್ ನೀಡಿದರು.
ಈಗಾಗಲೇ ಗೋರಖ್ಪುರ ಸಂಸದೀಯ ಕ್ಷೇತ್ರದಿಂದ ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಯೋಗಿ, ಇದೇ ಮೊದಲ ಸಲ ಶಾಸಕ ಸ್ಥಾನಕ್ಕಾಗಿ ಸ್ಪರ್ಧೆ ಮಾಡಿದ್ದಾರೆ.










