ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಗೀತಾ” ಚಿತ್ರದ ಟೀಸರ್ ಬಿಡುಗಡೆ…

356

ಬೆಂಗಳೂರು : ಇಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರು ನಟಿಸಿರುವ “ಗೀತಾ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ಗಣೇಶ್ ಅವರು ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಚಿತ್ರದಲ್ಲಿ ಗಣೇಶ್ ಅವರೊಡನೆ ಸಾನ್ವಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ರಂಗಾಯಣ ರಘು, ಪಾರ್ವತಿ ಹಾಗೂ ಇತರರು ನಟಿಸಿದ್ದಾರೆ. ಗಣೇಶ್ ಅವರು ತಮ್ಮ ಟ್ವಿಟರ್‍ನಲ್ಲಿ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದು, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ. ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

firstsuddi