ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ…

78
firstsuddi

ಬೆಳಗಾವಿ : ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಗೋವಾದ ಮಡಗಾವ್ ನ ಹುಸೇನ್ ದೇಸಾಯಿ ಹಾಗೂ ಆಜಾದ್ ಕಾದ್ರೊಳ್ಳಿ ಎಂಬ ಬಂಧಿತ ಆರೋಪಿಗಳು.

ಬಂಧಿತರು ಬೆಳಗಾವಿ ತಾಲೂಕಿನ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವಾಹನಗಳಲ್ಲಿ ಅಕ್ರಮವಾಗಿ ಗೋವಾ ರಾಜ್ಯಕ್ಕೆ ಗೋಮಾಂಸವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಹಿರೇಬಾಗೆವಾಡಿ ಪೊಲೀಸರು, ಗೋಮಾಂಸ ಸಮೇತ ಇಬ್ಬರು ಆರೋಪಿಗಳು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.