ಗ್ರಾ. ಪಂ. ಚುನಾವಣಾ ಫಲಿತಾಂಶದ ವಿಜಯೋತ್ಸವ ಆಚರಣೆಯ ವೇಳೆ ಜೀಪ್ ಪಲ್ಟಿ – ಯುವಕ ಸಾವು…

184
firstsuddi

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ವಿಜಯೋತ್ಸವ ಆಚರಣೆಯ ವೇಳೆ ವಾಹನ ಪಲ್ಟಿಯಾಗಿ ಯುವಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ನೆಟ್ಲ ನಿವಾಸಿ ನರೇಶ್ (30) ಎಂದು ಗುರುತಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಬಳಿಕ ಸಂಭ್ರಮಾಚರಣೆ ನಡೆಯುತ್ತಿದ್ದ ವೇಳೆ ಜೀಪ್ ಪಲ್ಟಿಯಾಗಿ ನರೇಶ್ ಮೃತಪಟ್ಟಿದ್ದು, ಜೀಪ್ ನಲ್ಲಿದ್ದ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.