ಗ್ರಾಮಕ್ಕೆ ಬಂತು ಮೊಸಳೆ ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ…

86
firstsuddi

ಕಾರವಾರ : ಗ್ರಾಮಕ್ಕೆ ಮೊಸಳೆಯೊಂದು ನುಗ್ಗಿರುವ ಘಟನೆ ದಾಂಡೇಲಿಯ ಕೊಗಿಲಬನ ಗ್ರಾಮದಲ್ಲಿ ಇಂದು ನಡೆದಿದೆ. ಬೆಳ್ಳಂಬೆಳಗ್ಗೆ ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯೊಂದು ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ಸಂಚರಿಸಿದೆ. ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ. ಆಹಾರ ಅರಸಿ ಮೊಸಳೆಗಳು ನದಿ ದಡದ ಸುತ್ತಮುತ್ತ ಓಡಾಟ ನಡೆಸುತ್ತಿದ್ದು, ಇಂದು ಗ್ರಾಮಕ್ಕೆ ಮೊಸಳೆ ನುಗ್ಗಿದ್ದರಿಂದ ಇದೀಗ ಜನರಲ್ಲಿ ಆತಂಕ ಶುರುವಾಗಿದೆ.