ಗ್ರಾಹಕರಿಗೆ ವಾಟ್ಸ್ಆ್ಯಪ್ ಸಹಾಯವಾಣಿ ಬಿಡುಗಡೆ ಮಾಡಿದ ಬೆಸ್ಕಾಂ.

72
firstsuddi

ಬೆಂಗಳೂರು : ವಿದ್ಯುತ್ ಸಂಬಂಧಿತ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಒಟ್ಟು 11 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಇಂದು ಬಿಡುಗಡೆ ಮಾಡಲಾಯಿತು. ಮಳೆಗಾಲ ಹಾಗೂ ತುರ್ತು ಸಂದರ್ಭಗಳಲ್ಲಿ ಬೆಸ್ಕಾಂನ ಹಾಲಿ ಸಹಾಯವಾಣಿ ಸಂಖ್ಯೆ 1912ಕ್ಕೆ ಸಾವಿರಾರು ಕರೆಗಳು ಬರುತ್ತಿವೆ. ನಿರಂತರ ಕಾರ್ಯ ನಿರ್ವಹಣೆಯಲ್ಲಿರುತ್ತದೆ. ಈ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಾಯವಾಣಿ ಕರೆ ಲಭ್ಯವಾಗದೇ ಇರುವ ಹಿನ್ನೆಲೆಯಲ್ಲಿ ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಪ್ರತಿ ಜಿಲ್ಲೆಗೆ ಒಂದರಂತೆ ನೀಡಲು ಸೂಚಿಸಿದ್ದೆ. ಈ ಹಿನ್ನೆಲೆಯಲ್ಲಿ ಇಂದು ಅದಕ್ಕೆ ಚಾಲನೆ ನೀಡಿದ್ದಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಧ್ಯಮಗಳಿಗೆ ತಿಳಿಸಿದರು.

ವಾಟ್ಸ್ ಆ್ಯಪ್ ಸಹಾಯವಾಣಿ ವಿವರ:
ಬೆಂಗಳೂರು ನಗರ ದಕ್ಷಿಣ ವೃತ್ತ: 8277884011, ಬೆಂಗಳೂರು ನಗರ ಪಶ್ಚಿಮ ವೃತ್ತ: 8277884012, ಬೆಂಗಳೂರು ನಗರ ಪೂರ್ವ ವೃತ್ತ: 8277884013, ಬೆಂಗಳೂರು ನಗರ ಉತ್ತರ ವೃತ್ತ: 8277884014, ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ: 8277884017, ರಾಮನಗರ ಜಿಲ್ಲೆ: 8277884018, ತುಮಕೂರು ಜಿಲ್ಲೆ: 8277884019, ಚಿತ್ರದುರ್ಗ ಜಿಲ್ಲೆ: 8277884020, ದಾವಣಗರೆ ಜಿಲ್ಲೆ: 8277884021

ವಿದ್ಯುತ್ ವ್ಯತ್ಯಯದ ಕುರಿತು ಗ್ರಾಹಕರು ವಾಟ್ಸ್ ಆ್ಯಪ್ ಸಂದೇಶಗಳನ್ನು ಕಳುಹಿಸಿದ ಕೂಡಲೇ ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮಕೈಗೊಳ್ಳಲಿದ್ದಾರೆ.