ಗ್ರೀನ್ ಜೋನ್ ಜಿಲ್ಲೆ ಚಿತ್ರದುರ್ಗದಲ್ಲಿ ಮೂವರು ತಬ್ಲೀಘಿಗಳಲ್ಲಿ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ…

180
firstsuddi

ಚಿತ್ರದುರ್ಗ : ರಾಜ್ಯದಲ್ಲಿ ಇಂದು ಒಂದೇ ದಿನ 48 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಗ್ರೀನ್ ಜೋನ್ ಪಟ್ಟಿಗೆ ಸೇರಿಕೊಂಡಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಇಂದು ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 45 ಪ್ರಕರಣಗಳು ಪತ್ತೆಯಾಗಿತ್ತು. ಈಗಾ ಮತ್ತೆ 3 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಗುಜರಾತ್‍ನ ಅಹಮದಾಬಾದ್‍ನಿಂದ ಮೇ.5 ರಂದು ಜಿಲ್ಲೆಗೆ ಆಗಮಿಸಿದ್ದ 15 ಮಂದಿ ತಬ್ಲೀಘಿಗಳ ಪೈಕಿ ಇಂದು ಮೂವರು ತಬ್ಲೀಘಿಗಳಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಹೆಚ್‍ಓ ಡಾ. ಪಾಲಾಕ್ಷ ಅವರು, ಗುಜರಾತ್‍ನಿಂದ ಆಗಮಿಸಿದ 15 ಮಂದಿ ತಬ್ಲೀಘಿಗಳಲ್ಲಿ ಮೂವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಇನ್ನುಳಿದ 12 ಮಂದಿಗೆ ನೆಗೆಟಿವ್ ವರದಿ ಬಂದಿದೆ. ಈಗಾಗಲೇ ಸೋಂಕಿತರನ್ನು ಪ್ರತ್ಯೇಕವಾಗಿರಿಸಲಾಗಿದೆ. ಅಲ್ಲದೇ ಅವರ ಸಂಪರ್ಕದಲ್ಲಿ ಬಂದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.