ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ : ಬಿಎಸ್‍ವೈ

64
firstsuddi

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಮೃತ ಚಂದ್ರಶೇಖರ್ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ಎಂ.ಪಿ. ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಇಂದು ನಾನು ಬೆಂಗಳೂರಿಗೆ ತೆರಳುತ್ತಿದ್ದು, ಸಿಎಂ ಭೇಟಿಯಾಗಿ ಈ ಕುರಿತು ಸಮಗ್ರ ತನಿಖೆ ಮಾಡಿಸುವಂತೆ ಒತ್ತಾಯಿಸುತ್ತೇನೆ ಅಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಅವನನ್ನು ಯಾರೋ ಅಪಹರಣ ಮಾಡಿದ್ದಾರೆಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳುತ್ತಿದ್ದರು. ಅವರು ಹೇಳಿದಂತೆಯೇ ನಿಜವಾಗಿದ್ದು, ಇಂದು ಚಂದ್ರು ಶವ ಕಣ್ಣು ಮುಂದೆ ಇದೆ. ದೇವರು ಅವನ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಬೇಸರ ಹೊರಹಾಕಿದರು.