ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕಡೆ ಗೆಲ್ಲಲಿದೆ: ಸಿಎಂ ವಿಶ್ವಾಸ.

37

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ನಾವು ಮೂರೂ ಕಡೆ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ ಎಂದರು. ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿ ದಿ.ಪಂಡಿತ್ ಜವಾಹರ್‍ಲಾಲ್ ನೆಹರೂ ಅವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ. ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ, ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದರು.