ಚನ್ನರಾಯಪಟ್ಟಣ ಟೌನ್ ಎಸ್‍ಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…

212
firstsuddi

ಹಾಸನ : ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಎಸ್‍ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದ ನಿವಾಸಿಯಾದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಕಳೆದ ಎರಡು ದಿನಗಳಲ್ಲಿ ಚನ್ನರಾಯಪಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಕಿರಣ್ ಕುಮಾರ್ ಅವರು ಪರಿಶೀಲನೆ ಮಾಡಿದ್ದರು. ನಿನ್ನೆ ರಾತ್ರಿ ಬಂಧಿತ ಆರೋಪಿಗಳಿಂದ ಸ್ಥಳ ಮಹಜರು ನಡೆಸಿದ ಬಳೀಕ ರೂಮಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚನ್ನರಯಪಟ್ಟಣದ ತಮ್ಮ ಮನೆಯಲ್ಲಿ ಫ್ಯಾನ್‍ಗೆ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.