ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ-ನಾಲ್ವರು ಪ್ರಾಣಾಪಾಯದಿಂದ ಪಾರು…

133
firstsuddi

ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾಗಿರುವ ಘಟನೆ ಜಿಲ್ಲೆಯ ಟಿ. ನರಸೀಫುರ ರಸ್ತೆಯ ಮೊಸಂಬಾಯನಹಳ್ಳಿ ಬಳಿ ನಡೆದಿದೆ. ನಿವೃತ್ತ ಹೆಡ್ ಕಾನ್ಸ್ ಟೇಬಲ್ ಬಸವಣ್ಣ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಕಾರಿನಲ್ಲಿ ನಾಲ್ವರು ಪ್ರಯಾಣಿಕರು ಚಲಿಸುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಪ್ರಯಾಣಿಕರು ಕೂಡಲೇ ಕಾರಿನಿಂದ ಇಳಿದಿದ್ದು, ಭಾರಿ ಅನಾಹುತದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದು, ಈ ಕುರಿತು ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.