ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ, ಅಪಾಯದಿಂದ ಪಾರು…

191
firstsuddi

ಬೆಂಗಳೂರು : ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಕರ್ನಾಟಕ-ತಮಿಳುನಾಡು ಗಡಿ ಶೂಲಗಿರಿ ಸಮೀಪ ನಡೆದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಬಸ್ ಎಂದು ತಿಳಿದು ಬಂದಿದ್ದು, ಬಸ್ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಬೇರೆ ವಾಹನದವರು ಕೂಡಲೇ ಬಸ್ ಚಾಲಕನಿಗೆ ತಿಳಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದು, ಚಾಲಕ ಹಾಗೂ ಬಸ್ಸಿನಲ್ಲಿದ್ದ 40ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.