ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ…

46
firstsuddi

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕೂತಿದ್ದ ಸೀಟ್​ನಲ್ಲಿ ಬ್ಯಾಗ್ ಬಿಟ್ಟು ಯುವತಿ ನದಿಗೆ ಹಾರಿದ್ದಾರೆ.

ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.