ಚಳ್ಳಕೆರಮ್ಮ ದೇವಾಲಯದಲ್ಲಿ ಕಳ್ಳರ ಕೈಚಳಕ – ಹುಂಡಿಯಲ್ಲಿದ್ದ ಹಣ ದೋಚಿ ಪರಾರಿ…

60
firstsuddi

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ನಗರದ ಚಳ್ಳಕೆರಮ್ಮ ದೇವಾಲಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ನಿನ್ನೆ ರಾತ್ರಿ ದೇವಸ್ಥಾನದ ಕಬ್ಬಿಣದ ಕಂಬಿಗಳನ್ನು ಮುರಿದು ಒಳನುಗ್ಗಿರುವ ಕಳ್ಳರು, ದೇಗುಲದ 2 ಹುಂಡಿಯಲ್ಲಿ ಇದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳತನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಖದೀಮರು ಯಾರೆಂಬುದು ತನಿಖೆ ನಂತರ ತಿಳಿದು ಬರಬೇಕಿದೆ.

ಘಟನಾ ಸ್ಥಳಕ್ಕೆ ಚಳ್ಳಕೆರೆ ತಹಶೀಲ್ದಾರರಾದ ಎನ್.ರಘುಮೂರ್ತಿ, ಪೊಲೀಸ್ ಇನ್ಸಪೇಕ್ಟರ್ ಜೆ.ತಿಪ್ಪೇಸ್ವಾಮಿ, ಪಿಎಸ್ಐ ಮಹೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.