ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ…

45
firstsuddi

ಬೆಂಗಳೂರು: ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ. ಈತ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ. ಕಾಲೇಜಿನಲ್ಲಿ ಫೆಸ್ಟ್ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮತ್ತೊಂದು ಗುಂಪು ಭಾಸ್ಕರ್ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸದ್ಯ ವಿದ್ಯಾರ್ಥಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.