ಚಾಮರಾಜನಗರ : ಕೆ.ಎಸ್.ಆರ್.ಟಿ.ಸಿ ಬಸ್ ಮರಕ್ಕೆ ಡಿಕ್ಕಿ…

197
firstsuddi

ಚಾಮರಾಜನಗರ : ಕೆ.ಎಸ್.ಆರ್.ಟಿ.ಸಿ ಬಸ್ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದ್ದು, 50 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ 6ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳು ಜಿಲ್ಲೆಯ ಗಂಗಾಧರ್, ಇಂದ್ರಮ್ಮ, ಸಿದ್ದಯ್ಯ, ಮಹೇಶ್ ಯೋಗಿಣಿ, ಬೆನಕಗೌಡ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಕೊಳ್ಳೆಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.