ಚಾಮರಾಜನಗರ : ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಶಿಶು ಶವ ಪತ್ತೆ…

104
firstsuddi

ಚಾಮರಾಜನಗರ : ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ

ಅಂದಾಜು ಆರು ದಿನದ ಶಿಶುವಾಗಿದ್ದು, ಕರುಳುಬಳ್ಳಿಯನ್ನು ಕೂಡ ಕತ್ತರಿಸಿರಲಿಲ್ಲ. ಅಂಗವೈಕಲ್ಯದಿಂದ ಜನಿಸಿದ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ನೀರಿನ ತೊಟ್ಟಿಗೆ ಬಿಸಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಶವಾಗಾರದ ಬಳಿ ಆಸ್ಪತ್ರೆ ಸಿಬ್ಬಂದಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಆಸ್ಪತ್ರೆಯಲ್ಲೇ ಹೆರಿಗೆಯಾಗಿದ್ದರೇ ಕರುಳ ಬಳ್ಳಿಯನ್ನು ಕತ್ತರಿಸುತ್ತಿದ್ದರಿಂದ ಆಸ್ಪತ್ರೆಯಲ್ಲಿ ಈ ಮಗು ಹುಟ್ಟಿಲ್ಲ ಎಂದು ತಿಳಿದುಬಂದಿದೆ.

ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.